ಜಗದ್ಗುರು ಶ್ರೀ ಮೌನೇಶ್ವರರ ಚರಿತ್ರೆ


ಜಗದ್ಗುರು ಶ್ರೀ ಮೌನೇಶ್ವರರು

|| ಶ್ರೀ ವಿಶ್ವಕರ್ಮ ಕುಲಸಂಜಾತ, ದಕ್ಷಿಣಕಾಶಿ ತಿಂಥಣಿ ಪುರವಾಸ ಜಗದ್ಗುರು ಶ್ರೀ ಮೌನೇಶ್ವರ ನಮೊಃ ನಮಃ ||


ಅಂದಿನ ಗುಲಬರ್ಗಾ ಜಿಲ್ಲೆಯ ಸುರಪುರ ತಾಲ್ಲೂಕಿನ ದೇವರಗೋನಾಳ(ದೇವರ ಗೋನಾಲ) ಎಂಬ ಗ್ರಾಮದ ಪಂಚಾಳ ಅಥವಾ ವಿಶ್ವಕರ್ಮ ಕುಲದಂಪತಿಗಳಾದ ಶೇಷಪ್ಪ ಆಚಾರ್ಯ ಮತ್ತು ಶೇಷಮ್ಮರೆಂಬ  (ಇವರಿಗೆ ಹಾವಪ್ಪ ಮತ್ತು ಹಾವಕ್ಕ ಎಂದು ಕರೆಯಲಾಗುತ್ತಿತ್ತು) ದಂಪತಿಗಳಿದ್ದರು. ಅವರಿಗೆ ಬಹಳಕಾಲ ಮಕ್ಕಳಾಗಿರಲಿಲ್ಲ. ಶೀಲೆ ಶೇಷಮ್ಮಳು ಆ ಊರಿನ ಆದಿಲಿಂಗೇಶ್ವರ ದೈವಕ್ಕೆ 12 ವರ್ಷಗಳ ಕಾಲ ದಿನನಿತ್ಯವೂ ಬೆಳಗ್ಗೆ ಪೂಜೆಗೈದು ಬರುತ್ತಿದ್ದಳು. ಕೊನೆಗೊಂದುದಿನ ಗಂಡನಾದ ಶೇಷಪ್ಪ ಆಚಾರ್ಯರಿಗೆ ಸಂಶಯ ಬಂದು ಅವಳನ್ನು ಹಿಂಬಾಲಿಸಿದಾಗ ಅವರಿಗೆ ದೃಗ್ಗೋಚರವೇ ಎದುರಾಯಿತು. ಏನೆಂದರೆ ಶೇಷಮ್ಮಳು ಆದಿಲಿಂಗೇಶ್ವರನಿಗೆ ಎಂದಿನಂತೆ ಪೂಜೆಗೈದು 'ತಂದೆ ಹನ್ನೆರಡು ವರ್ಷಗಳ ಕಾಲ ನಿನ್ನ ಪೂಜೆಗೈದಿರುವೆ ಈಗಲಾದರೂ ಮಕ್ಕಳ ಭಾಗ್ಯವನೀತ್ತು ಸಲಹು ತಂದೆ' ಎಂದು ಅಂಗಲಾಚಿ ಬೇಡಿಕೊಳ್ಳಲು  ಸಾಕ್ಷಾತ್ ಶಿವನೇ ಪ್ರತ್ಯಕ್ಷವಾಗಿ "ಮಗಳೇ ಶೇಷಮ್ಮ ನೀನು ನನ್ನ ಪನ್ನಂಗಾಭರಣವಾದ್ದರಿಂದ ಆ ಬ್ರಹ್ಮನು ನಿನ್ನ ದೈವದಲ್ಲಿ ಸೃಷ್ಟಿ ಬೆಳೆಸುವ ಸಂತಾನ ಭಾಗ್ಯ ಫಲವನ್ನಿಡುವ ಸಾಹಸ ಮಾಡಲಿಲ್ಲ. ಆದಕಾರಣ ನಾನೇ ನಿನ್ನ ಮಗನಾಗಿ ನಾಳೆಯ ಉಷಾ ಕಾಲದಲ್ಲಿ ನಿನ್ನ ಮಗ್ಗುಲಲ್ಲಿ ಮಲಗಿರುವೆ" ಎಂದು ಹೇಳಿ ಪರಮಾತ್ಮನು ಅಂತರ್ಗತನಾಗುತ್ತಾನೆ. ಇದನ್ನೆಲ್ಲ ಪ್ರತ್ಯಕ್ಷವಾಗಿ ದೇಗುಲದ ಒಂದು ಕಂಬದ ಮರೆಯಲ್ಲಿ ನಿಂತು  ನೋಡುತ್ತಿದ್ದ ಶೇಷಮ್ಮಳ ಗಂಡ ಶೇಷಪ್ಪ ಆಚಾರ್ಯರ ಸಂಶಯವೆಲ್ಲವೂ ದೂರವಾಗಿ ಭಕ್ತಿಯ ಮಹಾಪೂರವು ಅವರ ಮನದಲ್ಲಿ ನೆಲೆಯಾಗುತ್ತದೆ. ನಂತರ ಪರಶಿವನೇ ಅಯೋನಿಜನಾಗಿ ಮೌನೇಶ್ವರರ ಅವತಾರದಿ ಚೆಲುವಿನ, ಚೆಂದದ, ಮುದ್ದಾದ ಮಗುವಿನ ರೂಪದಲ್ಲಿ ವರಪ್ರಸಾದವಾಗಿ ಧರೆಗಿಳಿದು ಬರುತ್ತಾನೆ.

ಸಾಕ್ಷಾತ್ ಪರಶಿವನೇ ಮೌನೇಶ್ವರರಾಗಿ ಧರೆಗಿಳಿಯುವುದು

ಹೀಗೆ ಜಗದ್ಗುರು ಶ್ರೀ ಮೌನೇಶ್ವರರು ಬರೀ ಮಹಿಮಾಪುರುಷರಲ್ಲದೆ ಕಾಲಜ್ಞಾನಿಗಳು, ವಚನಕಾರರು, ಸಮನ್ವತಾವಾದಿಗಳು, ಮಹಾನ್ ಮಾನವತಾವಾದಿಗಳೂ ಆಗಿದ್ದಾರೆ. ಹೀಗೆ 16ನೇ ಶತಮಾನದಲ್ಲಿ ಬರುವ ಶರಣರ, ವಚನಕಾರರ, ಸಂತರ ಸಾಲಿನಲ್ಲಿ ಮೌನೇಶ್ವರರು ಪ್ರಮುಖರಾಗಿ ಕಂಡುಬರುತ್ತಾರೆ. ಮೌನೇಶ್ವರರು ಒಟ್ಟು 796ಕ್ಕೂ ಅಧಿಕ ವಚನಗಳನ್ನು ಬರೆದಿದ್ದಾರೆ. ಮೌನೇಶ್ವರರು ಸಾಕ್ಷಾತ್ ಶಿವನಾವತಾರಿಗಳಾದ್ದರಿಂದ ತಮ್ಮ ಎಲ್ಲ ವಚನಗಳಲ್ಲಿ ಶಿವನ ವಾಹನ ನಂದಿಯನ್ನು ಬಸವಣ್ಣನೆಂಬ ಅಂಕಿತನಾಮದೊಂದಿಗೆ ಬರೆದಿರುವುದನ್ನು ಕಾಣಬಹುದು. 

Post a Comment

0 Comments